ರೇಷನ್ ಕಾರ್ಡ್ ಇದ್ದವರಿಗೆ ಬಾರೀ ದೊಡ್ಡ ಗಿಫ್ಟ್ ನೀಡಿದ ಯಡಿಯೂರಪ್ಪ!!

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪಡಿತರ ಚೀಟಿ ಫಲಾನುಭವಿಗಳಿಗೆ ಪಡಿತರ ವಿತರಿಸುವ ಸಂದರ್ಭದಲ್ಲಿ ಯಾವುದೇ ದಾಖಲೆ ಕೇಳದಂತೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಇನ್ನು ವಿಶೇಷ ಆಂದೋಲನದ ಮೂಲಕ ಎಲ್ಲಾ ಅರ್ಹ ಫಲಾನುಭವಿಗಳಿಗೆ ಅವರ ಪಡಿತರ ಚೀಟಿಗಳ ಪ್ರತಿಯನ್ನು ಮುದ್ರಿಸಿ ನೀಡಲು ಕ್ರಮಕೈಗೊಳ್ಳಲಾಗಿದೆ.

 

ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಿಸುವ ಸಂದರ್ಭದಲ್ಲಿ ಯಾವುದೇ ದಾಖಲೆ ಕೇಳುವಂತಿಲ್ಲ ಎಂದು ಆಹಾರ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಪಡಿತರ ಚೀಟಿ, ಆಧಾರ್ ಕಾರ್ಡ್, ಗುರುತಿನ ಚೀಟಿಯನ್ನು ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಬಾರದು ಎಂದು ಹೇಳಲಾಗಿದೆ. ದಾಖಲಾತಿಗಳು ನೀರು ಪಾಲಾಗಿರುವ ಕಾರಣ ನ್ಯಾಯಬೆಲೆ ಅಂಗಡಿಗಳಲ್ಲಿ ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಬೇಕು ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಈ ಕುರಿತು ಕ್ರಮ ಕೈಗೊಂಡಿದೆ.ದಾಖಲಾತಿ ಕೇಳದೆ ಫಲಾನುಭವಿಗಳಿಗೆ ಪಡಿತರ ವಿತರಿಸುವಂತೆ ಸೂಚನೆ ನೀಡಿದೆ. ಪಡಿತರ ಪಡೆಯಲು ಬಂದವರ ಮೇಲೆ ಅನುಮಾನವಿದ್ದರೆ ಅವರ ಹೆಸರು, ವಿಳಾಸ, ಮೊಬೈಲ್ ನಂಬರ್ ಪಡೆದುಕೊಳ್ಳಬೇಕು.

Leave a Reply

Your email address will not be published. Required fields are marked *