ನೀವು ಪ್ರವಾಹ ಸಂತ್ರಸ್ಥರಾ? ಹಾಗಾದ್ರೆ ಇಷ್ಟು ಕೆಲಸ ಮಾಡಿ.. ಪರಿಹಾರ ಪಡೆಯಿರಿ!

ಮಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಮತ್ತು ಮನೆ ದುರಸ್ತಿಗೆ 1 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಪರಿಹಾರ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂ. ಹಾಗೂ ಮನೆ ದುರಸ್ತಿ ಕಾರ್ಯ ಕೈಗೊಳ್ಳಲು 1 ಲಕ್ಷ ರೂ. ನೆರವು ನೀಡಲಾಗುವುದು ಎಂದು ಘೋಷಿಸಿದರು. ಯಡಿಯೂರಪ್ಪ ನಡೆಗೆ ಈಗ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *