ಪ್ರವಾಹಪೀಡಿತ ಪ್ರದೇಶಕ್ಕೆ “ಅನರ್ಹ ಶಾಸಕ” ಎಂಟಿಬಿ ನಾಗರಾಜ್ ಕೊಟ್ಟ ಹಣವೆಷ್ಟು ಗೊತ್ತೆ?

ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ.

ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಸಾಕಷ್ಟು ಮಂದಿ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಹಲವು ಸಾವು-ನೋವುಗಳು ಕೂಡ ಸಂಭವಿಸಿದೆ.

ತನ್ನ ಕಾರ್ ಮೇಲೆ ಪೇಪರ್ ಎಸೆದ ಮುಸ್ಲಿಂ ಸಂತ್ರಸ್ಥೆ! ಬಳಿಕ ನಿರ್ಮಲಾ ಸೀತಾರಾಮನ್ ಮಾಡಿದ್ದೇನು ಗೊತ್ತೆ?

ತನ್ನ ಕಾರ್ ಮೇಲೆ ಪೇಪರ್ ಎಸೆದ ಮುಸ್ಲಿಂ ಸಂತ್ರಸ್ಥೆ! ಬಳಿಕ ನಿರ್ಮಲಾ ಸೀತಾರಾಮನ್ ಮಾಡಿದ್ದೇನು ಗೊತ್ತೆ?

ನೀವು ಪ್ರವಾಹ ಸಂತ್ರಸ್ಥರಾ? ಹಾಗಾದ್ರೆ ಇಷ್ಟು ಕೆಲಸ ಮಾಡಿ.. ಪರಿಹಾರ ಪಡೆಯಿರಿ!

ಮಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಮತ್ತು ಮನೆ ದುರಸ್ತಿಗೆ 1 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಪರಿಹಾರ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂ. ಹಾಗೂ ಮನೆ ದುರಸ್ತಿ ಕಾರ್ಯ ಕೈಗೊಳ್ಳಲು 1 ಲಕ್ಷ ರೂ. ನೆರವು ನೀಡಲಾಗುವುದು ಎಂದು ಘೋಷಿಸಿದರು. ಯಡಿಯೂರಪ್ಪ ನಡೆಗೆ ಈಗ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.

ಸ್ವಂತ ಮನೆ-ಜಮೀನು||ಯಡಿಯೂರಪ್ಪ ಸರ್ಕಾರ || ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಯಲ್ಲಿ ಸ್ವಂತ ಆಸ್ತಿ ಇದ್ದವರಿಗೆ..!

ಸ್ವಂತ ಮನೆ-ಜಮೀನು||ಯಡಿಯೂರಪ್ಪ ಸರ್ಕಾರ || ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಯಲ್ಲಿ ಸ್ವಂತ ಆಸ್ತಿ ಇದ್ದವರಿಗೆ..!

ಜೀವ ಉಳಿಸಿದ ಯೋಧರಿಗೆ ಮಲೆನಾಡ ಜನತೆ ಮಾಡಿದ್ದೇನು ಗೊತ್ತೆ?

ಚಿಕ್ಕಮಗಳೂರು: ಜೀವ ಉಳಿಸಿದ ವೀರ ಯೋಧರಿಗೆ ಗ್ರಾಮಸ್ಥರು ರಾಖಿ ಕಟ್ಟುವ ಮೂಲಕ ಬೀಳ್ಕೊಡುಗೆ ಕೊಟ್ಟಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ಗ್ರಾಮಸ್ಥರು, ನಿಮ್ಮಿಂದ ನಮ್ಮ ಜೀವ ಉಳಿದಿದೆ ಎಂದು ಕಣ್ಣೀರಿಟ್ಟು ಪ್ರತಿಯೊಬ್ಬ ಸೈನಿಕರಿಗೂ ರಾಖಿ ಕಟ್ಟಿದ್ದಾರೆ. ಈ ವೇಳೆ ಸೈನಿಕರು ತಂದಿದ್ದ ಹಣ್ಣು, ಬಿಸ್ಕೆಟ್‍ಗಳನ್ನು ಸಂತ್ರಸ್ತರಿಗೆ ಹಂಚಿದ್ದಾರೆ.